Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:4 - ಪರಿಶುದ್ದ ಬೈಬಲ್‌

4 ಚೂರಿ ಮಿಡತೆ ತಿಂದುಬಿಟ್ಟಿದ್ದನ್ನು ಗುಂಪು ಮಿಡತೆ ತಿಂದಿತು. ಗುಂಪು ಮಿಡತೆ ತಿಂದುಬಿಟ್ಟದ್ದನ್ನು ಹಾರುವ ಮಿಡತೆ ತಿಂದಿತು. ಹಾರುವ ಮಿಡತೆ ತಿಂದು ಉಳಿದದ್ದನ್ನು ನಾಶಮಾಡುವ ಮಿಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಚೂರಿವಿುಡತೆ ತಿಂದು ವಿುಕ್ಕದ್ದನ್ನು ಗುಂಪುವಿುಡತೆ ತಿಂದುಬಿಟ್ಟಿತು; ಗುಂಪುವಿುಡತೆ ತಿಂದು ವಿುಕ್ಕದ್ದನ್ನು ಸಣ್ಣವಿುಡತೆ ತಿಂದುಬಿಟ್ಟಿತು; ಸಣ್ಣವಿುಡತೆ ತಿಂದು ವಿುಕ್ಕದ್ದನ್ನು ದೊಡ್ಡವಿುಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:4
19 ತಿಳಿವುಗಳ ಹೋಲಿಕೆ  

“ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡತೆಗಳ ಗುಂಪು, ದೊಡ್ಡ ಮಿಡತೆ, ನಾಶಮಾಡುವ ಮಿಡತೆ, ಹಾರುವ ಮಿಡತೆ, ಚೂರಿ ಮಿಡತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ ಸುಭಿಕ್ಷ ಕಾಲವನ್ನು ದಯಪಾಲಿಸುವೆನು.


“ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳೆಯು ಬೆಳೆಯಲಾರಂಭಿಸಿದ ಕಾಲದಲ್ಲಿ ಆತನು ಮಿಡತೆಗಳನ್ನು ತಯಾರು ಮಾಡುತ್ತಿದ್ದನು. ಅರಸನು ಮೊದಲನೇ ಬೆಳೆಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳೆ ಇದು.


ನೀವು ಯುದ್ಧದಲ್ಲಿ ದೋಚಿಕೊಂಡಿದ್ದೀರಿ. ಅವುಗಳು ನಿಮ್ಮಿಂದ ತೆಗೆಯಲ್ಪಡುವವು. ಅನೇಕಾನೇಕ ಜನರು ಬಂದು ನಿಮ್ಮ ಸಂಪತ್ತನ್ನು ದೋಚಿಕೊಳ್ಳುವರು. ಮಿಡತೆಗಳು ನಿಮ್ಮ ಬೆಳೆಯನ್ನು ತಿಂದು ನಾಶಮಾಡಿದಂತೆ ಅದಿರುವದು.


ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು.


ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಮಿಡತೆಗಳನ್ನು ತರುವೆನು.


ಸರ್ವಶಕ್ತನಾದ ಯೆಹೋವನು ತನ್ನ ಮೇಲೆ ಆಣೆ ಇಟ್ಟುಕೊಂಡು ಹೀಗೆ ಹೇಳಿದ್ದಾನೆ: “ಬಾಬಿಲೋನೇ, ನಾನು ಖಂಡಿತವಾಗಿ ನಿನ್ನನ್ನು ವೈರಿ ಸೈನಿಕರಿಂದ ತುಂಬಿಸಿಬಿಡುವೆನು. ಅವರು ಮಿಡತೆಗಳ ಸಮೂಹದಂತೆ ವ್ಯಾಪಿಸುವರು. ಆ ಸೈನಿಕರು ನಿನ್ನ ವಿರುದ್ಧ ಯುದ್ಧದಲ್ಲಿ ಜಯಗಳಿಸುವರು. ಅವರು ನಿನ್ನ ಮೇಲೆ ನಿಂತುಕೊಂಡು ಜಯಘೋಷ ಮಾಡುವರು.”


ಆತನು ಆಜ್ಞಾಪಿಸಲು ಮಿಡತೆಗಳೂ ಜಿಟ್ಟೆಹುಳಗಳೂ ಅಸಂಖ್ಯಾತವಾಗಿ ಬಂದವು.


ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ


“ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.


“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.


“ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.


“ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಮಿಡತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ


ನಿಮ್ಮ ತೋಟದ ಎಲ್ಲಾ ಮರಗಳನ್ನೂ ಹೊಲದ ಪೈರುಗಳನ್ನೂ ಮಿಡತೆಗಳು ತಿಂದುಬಿಡುವವು.


ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.


ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು