ಯೋಯೇಲ 2:1 - ಪರಿಶುದ್ದ ಬೈಬಲ್1 ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ. ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”