ಯೋಯೇಲ 2:12 - ಪರಿಶುದ್ದ ಬೈಬಲ್12 ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಇಂತೆನ್ನುತ್ತಾನೆ - ಈಗಲಾದರೋ ನೀವು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಂಡು ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.” ಅಧ್ಯಾಯವನ್ನು ನೋಡಿ |
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’