ಯೋಯೇಲ 2:13 - ಪರಿಶುದ್ದ ಬೈಬಲ್13 ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?