Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:15 - ಪರಿಶುದ್ದ ಬೈಬಲ್‌

15 ಚೀಯೋನಿನಲ್ಲಿ ತುತ್ತೂರಿ ಊದಿರಿ. ವಿಶೇಷ ಕೂಟಕ್ಕಾಗಿ ಜನರನ್ನು ಕೂಡಿಸಿರಿ. ಉಪವಾಸದ ದಿನ ಗೊತ್ತುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಚೀಯೋನಿನಲ್ಲಿ ಕೊಂಬೂದಿರಿ, ಉಪವಾಸದಿನವನ್ನು ಗೊತ್ತುಮಾಡಿರಿ, ಸಂಘವನ್ನು ನೆರೆಯಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಚೀಯೋನಿನಲ್ಲಿ ಕೊಂಬು ಊದಿರಿ; ಪವಿತ್ರ ಉಪವಾಸವನ್ನು ಸಾರಿರಿ; ಪವಿತ್ರ ಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:15
8 ತಿಳಿವುಗಳ ಹೋಲಿಕೆ  

ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ನಾಯಕರು ಒಂದು ದಿನವನ್ನು ಉಪವಾಸದ ದಿನವಾಗಿ ಪ್ರಕಟಿಸಿದರು. ಆ ದಿನ ಅವರು ಜನರನ್ನೆಲ್ಲ ಸಭೆಸೇರಿಸಿದರು. ನಾಬೋತನನ್ನು ಜನರೆದುರಿಗೆ ಪ್ರಮುಖವಾದ ಒಂದು ಸ್ಥಳದಲ್ಲಿ ಅವರು ಕುಳ್ಳಿರಿಸಿದರು.


ನೀನು ಎರಡು ತುತ್ತೂರಿಗಳನ್ನು ಲಘು ಸ್ವರದಿಂದ ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಕೂಡಿರಬೇಕು.


ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.


ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.


ಆ ಪತ್ರದಲ್ಲಿ ಹೀಗೆ ಬರೆದಿತ್ತು: “ಉಪವಾಸದ ಒಂದು ದಿನವನ್ನು ಗೊತ್ತುಮಾಡಿ, ಆ ದಿನವನ್ನು ಪ್ರಕಟಿಸಿ, ನಂತರ ಪಟ್ಟಣದ ಜನರನ್ನೆಲ್ಲ ಸಭೆ ಸೇರಿಸಿರಿ.


“ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು