ಯೋಯೇಲ 2:19 - ಪರಿಶುದ್ದ ಬೈಬಲ್19 ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರ ಬಿನ್ನಹವನ್ನು ಲಾಲಿಸಿ ಅವರಿಗೆ ಹೀಗೆ ಹೇಳಿದನು - ಇಗೋ, ನಾನು ಧಾನ್ಯದ್ರಾಕ್ಷಾರಸತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ; ಅವುಗಳಿಂದ ನಿಮಗೆ ತೃಪ್ತಿಯಾಗುವದು; ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.