Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:2 - ಪರಿಶುದ್ದ ಬೈಬಲ್‌

2 ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:2
34 ತಿಳಿವುಗಳ ಹೋಲಿಕೆ  

ನನ್ನ ಜನಾಂಗಕ್ಕೆ ವಿರುದ್ಧವಾಗಿ ಬಲಶಾಲಿಯಾದ ದೊಡ್ಡ ರಾಜ್ಯವು ಯುದ್ಧಕ್ಕೆ ಬರುವದು. ಅವರು ಸೈನಿಕರನ್ನು ಲೆಕ್ಕಿಸಲು ಸಾಧ್ಯವಿಲ್ಲ. ಆ ಮಿಡತೆಗಳಂತಿರುವ ಸೈನಿಕರು ನಿಮ್ಮನ್ನು ಸೀಳಿಬಿಡುವರು. ಅವರ ಹಲ್ಲುಗಳು ಸಿಂಹದ ಹಲ್ಲಿನಂತಿವೆ.


ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.


“ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡತೆಗಳ ಗುಂಪು, ದೊಡ್ಡ ಮಿಡತೆ, ನಾಶಮಾಡುವ ಮಿಡತೆ, ಹಾರುವ ಮಿಡತೆ, ಚೂರಿ ಮಿಡತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ ಸುಭಿಕ್ಷ ಕಾಲವನ್ನು ದಯಪಾಲಿಸುವೆನು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ಆದ್ದರಿಂದ ಸಮುದ್ರವು ಭೋರ್ಗರೆಯವಂತೆ ಆ ದಿನದಲ್ಲಿ ಗರ್ಜನೆಯಿರುವುದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ.


ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.


ನೀವು ಒಂದು ಹೊಸ ಸ್ಥಳಕ್ಕೆ ಬಂದಿರುವಿರಿ. ಅದು ಇಸ್ರೇಲಿನ ಜನರು ಬಂದ ಬೆಟ್ಟದ ಸ್ಥಳವಲ್ಲ. ಮುಟ್ಟುವುದಕ್ಕೆ ಸಾಧ್ಯವಾಗುವಂತಹ ಮತ್ತು ಬೆಂಕಿ ಹತ್ತಿಕೊಂಡಿರುವಂತಹ ಬೆಟ್ಟದ ಬಳಿಗೆ ನೀವು ಬಂದಿಲ್ಲ. ನೀವು ಕಗ್ಗತ್ತಲೆ, ದುಃಖ ಮತ್ತು ಬಿರಗಾಳಿಯ ಬಳಿಗೆ ಬಂದಿಲ್ಲ.


ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.


ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ಅವರು, “ನಮ್ಮನ್ನು ಯಾವುದೂ ಕದಲಿಸದು; ನಮಗೆ ಕೇಡಾಗದಿರುವುದರಿಂದ ಸಂತೋಷವಾಗಿರೋಣ” ಎಂದುಕೊಂಡಿದ್ದಾರೆ.


“ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು.


ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು.


ಮಿಡತೆಗಳು ಈಜಿಪ್ಟ್ ದೇಶದೊಳಗೆ ಹಾರಿಬಂದು ನೆಲದ ಮೇಲೆ ಇಳಿದವು. ಈಜಿಪ್ಟಿನಲ್ಲಿ ಹಿಂದೆಂದೂ ಇಷ್ಟು ಮಿಡತೆಗಳು ಇರಲಿಲ್ಲ; ಇನ್ನು ಮುಂದೆಯೂ ಇರುವುದಿಲ್ಲ.


ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆತಾತಂದಿರೂ ನೋಡಿಲ್ಲದಷ್ಟು ಮಿಡತೆಗಳಿರುತ್ತವೆ’” ಎಂದು ಹೇಳಿದರು. ಬಳಿಕ ಅವರು ಫರೋಹನ ಬಳಿಯಿಂದ ಹೊರಟುಹೋದರು.


ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.


ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.


ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು.


ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.


ಆದರೆ ನೀನು ಮತ್ತು ಬೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಬರುವಿರಿ.’”


ಬಹಳ ದಿನಗಳಾದ ತರುವಾಯ, ಯೆಹೋವನು ನನಗೆ, “ಯೆರೆಮೀಯನೇ, ಪೆರಾತ್‌ಗೆ ಹೋಗು, ನಾನು ನಿನಗೆ ಅಲ್ಲಿ ಬಚ್ಚಿಡಲು ಹೇಳಿದ ನಡುಪಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.


“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.


ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.


ಅದು ಒಂದು ಮಹಾ ವಿಶೇಷ ದಿವಸವಾಗಿರುವದು. ಆ ದಿವಸದಲ್ಲಿ ಬೆಳಕಾಗಲಿ ಚಳಿಯಾಗಲಿ ಹಿಮವಾಗಲಿ ಇರುವದಿಲ್ಲ. ಇದು ಹೇಗೆ ಎಂದು ಯೆಹೋವನಿಗೆ ಮಾತ್ರ ಗೊತ್ತು. ರಾತ್ರಿ ಬರಬೇಕಾದ ವೇಳೆಯಲ್ಲಿ ಹಗಲು ಇನ್ನೂ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು