Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:20 - ಪರಿಶುದ್ದ ಬೈಬಲ್‌

20 ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:20
15 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ಆ ನದಿಯು ಇಬ್ಭಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ಈ ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು.


“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಅವರ ಹೆಣಗಳು ಹೊರಗೆ ಬಿಸಾಡಲ್ಪಡುವವು. ದುರ್ವಾಸನೆಯು ಹರಡುವದು, ರಕ್ತವು ಪರ್ವತದಿಂದ ಹರಿಯುವುದು.


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


“ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.


ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ.


ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯನಲ್ಲ! ನಾನು ಈ ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು. ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.


ಅವುಗಳನ್ನು ಕೂಡಿಸಿದಾಗ ರಾಶಿರಾಶಿಗಳಾದವು. ದೇಶವು ದುರ್ವಾಸನೆಯಿಂದ ತುಂಬಿಹೋಯಿತು.


ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.


ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು