ಯೋಯೇಲ 2:26 - ಪರಿಶುದ್ದ ಬೈಬಲ್26 ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀವು ಹೊಟ್ಟೆತುಂಬಾ ಊಟಮಾಡಿ ತೃಪ್ತಿಗೊಂಡು ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ; ನನ್ನ ಜನರು ಎಂದಿಗೂ ಆಶಾಭಂಗಪಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು. ಅಧ್ಯಾಯವನ್ನು ನೋಡಿ |
ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.