3 ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.
3 ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.
3 ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”
ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.
ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)
ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.
‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.
ನೀವು ಯುದ್ಧದಲ್ಲಿ ದೋಚಿಕೊಂಡಿದ್ದೀರಿ. ಅವುಗಳು ನಿಮ್ಮಿಂದ ತೆಗೆಯಲ್ಪಡುವವು. ಅನೇಕಾನೇಕ ಜನರು ಬಂದು ನಿಮ್ಮ ಸಂಪತ್ತನ್ನು ದೋಚಿಕೊಳ್ಳುವರು. ಮಿಡತೆಗಳು ನಿಮ್ಮ ಬೆಳೆಯನ್ನು ತಿಂದು ನಾಶಮಾಡಿದಂತೆ ಅದಿರುವದು.
ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.