Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:7 - ಪರಿಶುದ್ದ ಬೈಬಲ್‌

7 ಆ ಸೈನಿಕರು ವೇಗವಾಗಿ ಓಡುವರು; ಗೋಡೆ ಹತ್ತುವರು, ನೇರವಾಗಿ ಮುಂದೆ ಹೋಗುವರು. ದಾರಿಯಿಂದ ಅತ್ತಿತ್ತ ಹೋಗರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವು ಶೂರರಂತೆ ಹೋರಾಡುತ್ತವೆ, ಯೋಧರಂತೆ ಗೋಡೆಗಳನ್ನೇರುತ್ತವೆ, ಸಾಲುಸಾಲಾಗಿ ನಡೆದು, ಕ್ರಮತಪ್ಪದೆ ಸಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆಯೇರುತ್ತವೆ; ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ, ಆ ಸಾಲುಗಳನ್ನು ಕಲಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:7
11 ತಿಳಿವುಗಳ ಹೋಲಿಕೆ  

ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪುಗುಂಪಾಗಿ ಹೋಗುತ್ತವೆ.


ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


ದಾವೀದನು ತನ್ನ ಜನರಿಗೆ ಅಂದು, “ನೀವು ಯೆಬೂಸಿಯರನ್ನು ಸೋಲಿಸಬೇಕೆಂದಿದ್ದರೆ ಜಲಮಾರ್ಗದ ಮೂಲಕ ಹೋಗಿ ಶತ್ರುಗಳಾದ ಕುಂಟರು ಮತ್ತು ಕುರುಡರನ್ನು ಎದುರಿಸಿ” ಎಂದು ಹೇಳಿದನು. ಆದ್ದರಿಂದಲೇ “ಕುರುಡರು ಮತ್ತು ಕುಂಟರು ಮನೆಯೊಳಕ್ಕೆ ಬರಲಾಗದು” ಎಂಬ ನಾಣ್ಣುಡಿ ಉಂಟಾಯಿತು.


“ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.


ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು. ಕ್ರೀಡಾಪಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.


ನನ್ನ ಮೇಲೆ ಎಡಬಿಡದೆ ಆಕ್ರಮಣ ಮಾಡಿ ಯುದ್ಧ ವೀರನಂತೆ ನನ್ನ ಮೇಲೆ ಓಡಿಬರುವನು.


ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.


ಅಶೇರ್‌ಕುಲದಿಂದ ನಲವತ್ತು ಸಾವಿರ ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು