ಯೋಯೇಲ 3:1 - ಪರಿಶುದ್ದ ಬೈಬಲ್1 “ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಗೋ, ಆ ದಿನಗಳಲ್ಲಿ, ನಾನು ಯೆಹೂದದ ಮತ್ತು ಯೆರೂಸಲೇವಿುನ ದುರವಸ್ಥೆಯನ್ನು ತಪ್ಪಿಸುವ ಕಾಲದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ, ಅಧ್ಯಾಯವನ್ನು ನೋಡಿ |
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.