ಯೋಯೇಲ 3:10 - ಪರಿಶುದ್ದ ಬೈಬಲ್10 ನಿಮ್ಮ ನೇಗಿಲ ಗುಳಗಳನ್ನು ಕತ್ತಿಯನ್ನಾಗಿ ಮಾಡಿರಿ. ಕುಡುಗೋಲುಗಳಿಂದ ಬರ್ಜಿಯನ್ನು ಮಾಡಿರಿ. ನಿಮ್ಮ ಬಲಹೀನನಾದ ಸೈನಿಕನು, “ನಾನು ಬಲಶಾಲಿ” ಅನ್ನಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, “ನಾನು ಶೂರನು” ಎಂದು ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿ ಮಾಡಿರಿ; ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ; ಬಲಹೀನನು ಸಹ ಬಲಾಢ್ಯನಂತೆ ಯುದ್ಧಕ್ಕೆ ನಿಂತುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮ್ಮ ಗುಳಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿಯೂ ಕುಡುಗೋಲುಗಳನ್ನು ಬರ್ಜಿಗಳನ್ನಾಗಿಯೂ ಮಾಡಿರಿ; ದುರ್ಬಲನೂ ಶೂರನೆಂದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ನೇಗಿಲುಗಳ ಗುಳಗಳನ್ನು ಖಡ್ಗಗಳನ್ನಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳನ್ನಾಗಿಯೂ ಬಡಿಯಿರಿ ಬಲಹೀನನು ಸಹ ನಾನು ಶಕ್ತಿವಂತನು ಎಂದು ಹೇಳಲಿ. ಅಧ್ಯಾಯವನ್ನು ನೋಡಿ |
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.