ಯೋಯೇಲ 3:12 - ಪರಿಶುದ್ದ ಬೈಬಲ್12 ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜನಾಂಗಗಳು ಎಚ್ಚರಗೊಂಡು ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಲಿ; ಅಲ್ಲೇ ಸುತ್ತಣ ಜನಾಂಗಗಳಿಗೆಲ್ಲಾ ನ್ಯಾಯತೀರಿಸಲು ಆಸೀನನಾಗುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು. ಅಧ್ಯಾಯವನ್ನು ನೋಡಿ |
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನ್ನು ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನ್ನು ಆರಿಸುತ್ತೇನೆ. ಇವನನ್ನು ಮೃತ್ಯುಸಮುದ್ರದ ಪೂರ್ವದಲ್ಲಿರುವ ‘ಪ್ರಯಾಣಿಕರ ಕಣಿವೆ’ ಯಲ್ಲಿ ಸಮಾಧಿ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಬ ಹೊಸ ಹೆಸರಿನಿಂದ ಕರೆಯಲ್ಪಡುವದು.