Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:18 - ಪರಿಶುದ್ದ ಬೈಬಲ್‌

18 ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:18
18 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ಆ ನದಿಯು ಇಬ್ಭಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ಈ ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು.


ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.


ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.


ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.


ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.


ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


“ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ. ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ. ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”


“ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.


ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.


ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು