Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:20 - ಪರಿಶುದ್ದ ಬೈಬಲ್‌

20 ಆದರೆ ಯೆಹೂದದಲ್ಲಿ ಯಾವಾಗಲೂ ಜನರು ವಾಸಿಸುವರು. ಅನೇಕ ತಲೆಮಾರಿನವರೆಗೆ ಜನರು ಜೆರುಸಲೇಮಿನಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಯೆಹೂದವು ಸದಾ ಜನಭರಿತವಾಗಿರುವದು; ಯೆರೂಸಲೇಮು ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:20
3 ತಿಳಿವುಗಳ ಹೋಲಿಕೆ  

ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ.


ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು