ಯೋಯೇಲ 3:3 - ಪರಿಶುದ್ದ ಬೈಬಲ್3 ನನ್ನ ಜನರಿಗಾಗಿ ಚೀಟು ಹಾಕಿದರು. ಅವರು ಹುಡುಗರನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು; ಹುಡುಗಿಯರನ್ನು ಮಾರಿ ದ್ರಾಕ್ಷಾರಸವನ್ನು ಕೊಂಡುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೌದು, ನನ್ನ ಜನರಿಗಾಗಿ ಚೀಟುಹಾಕಿವೆ, ಸೂಳೆಗಾಗಿ ಹುಡುಗನನ್ನು ಬದಲು ಮಾಡಿವೆ, ದ್ರಾಕ್ಷಾರಸಕ್ಕೆ ಹುಡುಗಿಯನ್ನು ಬದಲು ಕೊಟ್ಟು ಪಾನಮಾಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ. ಅಧ್ಯಾಯವನ್ನು ನೋಡಿ |