Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:4 - ಪರಿಶುದ್ದ ಬೈಬಲ್‌

4 “ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತೂರೇ, ಚೀದೋನೇ, ಫಿಲಿಷ್ಟಿಯ ರಾಷ್ಟ್ರಗಳೇ, ನನ್ನ ಗೊಡವೆ ನಿಮಗೇಕೆ? ನನಗೆ ಪ್ರತೀಕಾರಮಾಡುವಿರೋ? ಸುಮ್ಮನೆ ತಂಟೆಮಾಡುವಿರೋ? ನೀವು ಮಾಡುವ ಕೇಡನ್ನು ತ್ವರೆಯಾಗಿ, ಶೀಘ್ರವಾಗಿ ನಿಮ್ಮ ತಲೆಗೇ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:4
24 ತಿಳಿವುಗಳ ಹೋಲಿಕೆ  

ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.


ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.


ಇದು ನೆರವೇರುವುದು, ಯಾಕೆಂದರೆ ದೇವರು ದಂಡನೆಗಾಗಿ ಸಮಯವನ್ನು ಆರಿಸಿಕೊಂಡಿದ್ದಾನೆ. ಜನರು ಚೀಯೋನಿನಲ್ಲಿ ಮಾಡಿದ ಕಾರ್ಯಗಳಿಗೆ ದಂಡನೆಯನ್ನು ಅನುಭವಿಸುವುದಕ್ಕಾಗಿ ಆತನು ಒಂದು ವರ್ಷವನ್ನು ಆರಿಸಿಕೊಂಡಿದ್ದಾನೆ.


ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.


ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು.


ಯೆಫ್ತಾಹನು ಅಮ್ಮೋನಿಯರ ಅರಸನಿಗೆ ತನ್ನ ದೂತರ ಮೂಲಕ, “ಅಮ್ಮೋನಿಯರ ಮತ್ತು ಇಸ್ರೇಲರ ಮಧ್ಯೆ ಯಾವ ಸಮಸ್ಯೆ ಇದೆ? ನೀವು ನಮ್ಮ ದೇಶದಲ್ಲಿ ಯುದ್ಧಮಾಡಲು ಏಕೆ ಬಂದಿರುವಿರಿ?” ಎಂಬ ಸಂದೇಶವನ್ನು ಕಳುಹಿಸಿದನು.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಆದರೆ ನ್ಯಾಯತೀರ್ಪಿನ ದಿನದಲ್ಲಿ ಟೈರ್, ಸೀದೋನ್‌ಗಳಿಗಿಂತಲೂ ನಿಮ್ಮ ಸ್ಥಿತಿಯು ಬಹಳ ದುಸ್ಥಿತಿಗೆ ಒಳಗಾಗುವುದೆಂದು ನಾನು ನಿಮಗೆ ಹೇಳುತ್ತೇನೆ.


“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.


ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಸ್ಥಿತಿಯು ಟೈರ್ ಮತ್ತು ಸಿದೋನ್‌ಗಳ ಸ್ಥಿತಿಗಿಂತಲೂ ಕಠಿಣವಾಗಿರುವುದು.


ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.


ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಬಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಬಂದಿತು.


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು