ಯೋಯೇಲ 3:5 - ಪರಿಶುದ್ದ ಬೈಬಲ್5 ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಬೆಳ್ಳಿಬಂಗಾರಗಳನ್ನು ಕಸುಕೊಂಡಿದ್ದೀರಿ, ನನ್ನ ಒಳ್ಳೊಳ್ಳೆಯ ಪ್ರಿಯವಸ್ತುಗಳನ್ನು ನಿಮ್ಮ ಸೌಧಗಳಿಗೆ ಸೂರೆಮಾಡಿಕೊಂಡು ಹೋಗಿದ್ದೀರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ. ಅಧ್ಯಾಯವನ್ನು ನೋಡಿ |
ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.
ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.