ಯೋಯೇಲ 3:7 - ಪರಿಶುದ್ದ ಬೈಬಲ್7 ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಂತಿರಲು, ನೀವು ಅವರನ್ನು ಮಾರಿದ ಊರುಗಳಿಂದ ದಂಗೆಯೆದ್ದು ಹೊರಬರುವಂತೆ ಅವರನ್ನು ಹುರಿದುಂಬಿಸುವೆನು. ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟುಬರುವಂತೆ ನಾನು ಅವರನ್ನು ಹುರಿಗೊಳಿಸಿ ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿ |
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.