Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:9 - ಪರಿಶುದ್ದ ಬೈಬಲ್‌

9 ಜನಾಂಗದವರಿಗೆ ಇದನ್ನು ಪ್ರಕಟಿಸು: ಯುದ್ಧಕ್ಕೆ ತಯಾರಾಗಿರಿ! ಶೂರರನ್ನು ಎಚ್ಚರಿಸಿರಿ! ಯುದ್ಧ ವೀರರು ಹತ್ತಿರಕ್ಕೆ ಬರಲಿ; ಅವರು ಬರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ರಾಷ್ಟ್ರಗಳಿಗೆ ಹೀಗೆ ಪ್ರಕಟಿಸಿರಿ: ರಾಷ್ಟ್ರಗಳೇ, ಯುದ್ಧಸನ್ನದ್ಧರಾಗಿರಿ. ಶೂರರನ್ನು ಎಚ್ಚರಗೊಳಿಸಿರಿ; ಯೋಧರೆಲ್ಲರೂ ಒಟ್ಟುಗೂಡಲಿ; ಯುದ್ಧಕ್ಕೆ ಹೊರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನಾಂಗಗಳಲ್ಲಿ ಹೀಗೆ ಪ್ರಕಟಿಸಿರಿ - [ಜನಾಂಗಗಳೇ,] ಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಯೋಧರೆಲ್ಲರೂ ಕೂಡಲಿ, ಯುದ್ಧಕ್ಕೆ ಹೊರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧಕ್ಕೆ ಇದನ್ನು ಸಿದ್ಧಮಾಡಿರಿ; ಶೂರರನ್ನು ಎಬ್ಬಿಸಿರಿ; ಯುದ್ಧಭಟರೆಲ್ಲರು ಸಮೀಪಿಸಿ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:9
16 ತಿಳಿವುಗಳ ಹೋಲಿಕೆ  

“‘ಸಿದ್ಧರಾಗಿರಿ! ನಿಮ್ಮೊಂದಿಗೆ ಸೇರಿರುವ ಸೈನ್ಯದೊಂದಿಗೆ ಸಿದ್ಧರಾಗಿರಿ. ನೀವು ಎಚ್ಚರವಾಗಿದ್ದು ಸಿದ್ಧರಾಗಿರಬೇಕು.


“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’


ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.


ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.


“ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.


ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”


ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!


ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.


ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು