Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:12 - ಪರಿಶುದ್ದ ಬೈಬಲ್‌

12 ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೋ ಅಂದರೆ ಆತನಲ್ಲಿ ನಂಬಿಕೆ ಇಟ್ಟರೋ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಕೊನ್‍ ಕೊನ್ ತೆಕಾ ಸ್ವಿಕಾರ್ ಕರಲ್ಲ್ಯಾನಿ, ತೆಚ್ಯಾ ನಾವಾ ವರ್ತಿ ವಿಶ್ವಾಸ್ ಥವ್ತಲ್ಯಾ ತೆಂಕಾ ತೆನಿ ದೆವಾಚಿ ಪೊರಾ ಹೊತಲೆ ಅದಿಕಾರ್ ತೆನಿ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:12
27 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.


ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.


ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ.


ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.


ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ.


“ನಿಮ್ಮನ್ನು ಅಂಗೀಕರಿಸುವವನು ನನ್ನನ್ನು ಸಹ ಅಂಗೀಕರಿಸುವನು. ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿದಾತನನ್ನು (ದೇವರನ್ನು) ಸಹ ಅಂಗೀಕರಿಸುವನು.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.


ಎಲ್ಲಾ ಜನರು ಆತನಲ್ಲಿ ಭರವಸೆ ಇಡುವರು.”


ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ.


ಯೆಹೋವನಾದ ನಾನು ಹೀಗೆಂದುಕೊಂಡೆ: “ನಾನು ಸಂತೋಷದಿಂದ ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುವೆನು. ಬೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನ್ನು ನಿಮಗೆ ಕೊಡುವುದಕ್ಕೆ ನಾನು ಸಂತೋಷಪಡುವೆನು. ನೀವು ನನ್ನನ್ನು ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನ್ನ ಹಿಂಬಾಲಕರಾಗಿರುವಿರೆಂದು ಭಾವಿಸಿದ್ದೆ.


“ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.


“ಯಾವನಾದರೂ ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು.


ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.


ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.


ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ.


ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ಇಸ್ರೇಲಿನ ಜನರನ್ನು ಎಂದೆಂದಿಗೂ ನಿನ್ನ ಸ್ವಂತ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನು ಅವರಿಗಾಗಿ ದೇವರಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು