Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:14 - ಪರಿಶುದ್ದ ಬೈಬಲ್‌

14 ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಶಬ್ದ್ ಮಾನುಸ್ ಹೊಲೊ ಅನಿ ಕುರ್ಪೆನ್ ಅನಿ ಖರ್‍ಯಾನ್ ಅಮ್ಚ್ಯಾ ಮದ್ದಿ ತೆನಿ ಜಿವನ್ ಕರ್ಲ್ಯಾನ್. ಅನಿ ಅಮಿ ತೆಚಿ ಮಹಿಮಾ ಬಗಟ್ಲಾವ್. ದೆವಾಚ್ಯಾ ಎಕ್ಲ್ಯಾಚ್ ಲೆಕಾನ್ ಅಪ್ನಾಚ್ಯಾ ಬಾಬಾಕ್ನಾ ಘೆಟಲ್ಲಿ ಮಹಿಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:14
60 ತಿಳಿವುಗಳ ಹೋಲಿಕೆ  

ದೇವರು ತನ್ನ ಒಬ್ಬನೇ ಮಗನ ಮೂಲಕ ನಮಗೆ ಜೀವವನ್ನು ಕೊಡುವುದಕ್ಕಾಗಿ ಆತನನ್ನು ಈ ಲೋಕಕ್ಕೆ ಕಳುಹಿಸಿದನು. ಹೀಗೆ ದೇವರು ತನ್ನ ಪ್ರೀತಿಯನ್ನು ನಮಗೆ ತೋರಿಸಿದ್ದಾನೆ.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.”


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,


ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.


ದೇವರು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿದ್ದನ್ನು ನಾವು ನೋಡಿದ್ದೇವೆ. ನಾವು ಈಗ ಜನರಿಗೆ ಹೇಳುತ್ತಿರುವುದು ಅದನ್ನೇ.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)


ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.


ಒಂದು ಸಣ್ಣ ಸಸಿಯು ಬೆಳೆಯುವ ರೀತಿಯಲ್ಲಿ ಯೆಹೋವನ ಮುಂದೆ ಆತನು ಬೆಳೆದನು. ಆತನು ಒಣ ನೆಲದಿಂದ ಚಿಗುರುವ ಬೇರಿನಂತಿದ್ದನು. ಆತನು ಒಬ್ಬ ವಿಶೇಷ ಪುರುಷನಂತೆ ತೋರಲಿಲ್ಲ. ಅಂಥ ಲಕ್ಷಣಗಳೇನೂ ಆತನಲ್ಲಿರಲಿಲ್ಲ. ನಾವು ಆತನನ್ನು ನೋಡಿದಾಗ ಆತನಲ್ಲಿ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ಕ್ರಿಸ್ತನೂ ಇದೇ ರೀತಿ ನೇಮಿಸಲ್ಪಟ್ಟನು. ಆತನು ಪ್ರಭಾವದ ಪ್ರಧಾನಯಾಜಕನಾಗಿ ತನ್ನನ್ನು ತಾನೇ ಆರಿಸಿಕೊಳ್ಳಲಿಲ್ಲ. ಆದರೆ ದೇವರು ಆತನನ್ನು ಆರಿಸಿದನು. ದೇವರು ಕ್ರಿಸ್ತನಿಗೆ ಹೀಗೆ ಹೇಳಿದನು: “ನೀನು ನನ್ನ ಮಗನು. ಈ ದಿನ ನಾನು ನಿನ್ನ ತಂದೆಯಾದೆನು.”


ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ.


ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ: “ನೀನು ನನ್ನ ಮಗ; ಈ ದಿನ ನಾನು ನಿನ್ನ ತಂದೆಯಾದೆನು.” ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ: “ನಾನು ಅವನ ತಂದೆಯಾಗಿರುವೆನು, ಅವನು ನನ್ನ ಮಗನಾಗಿರುವನು.”


ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?


ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು.


ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು.


ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.


ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.


ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ ನೆಂದು ಕರೆಯುತ್ತಿದ್ದರು.


ಕ್ರಿಸ್ತನಲ್ಲಿ ಸರ್ವಜ್ಞಾನವು ಮತ್ತು ತಿಳುವಳಿಕೆಯು ಬಚ್ಚಿಟ್ಟಿರುವ ನಿಕ್ಷೇಪಗಳಂತಿವೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.


ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಮಗನು. ಇಂದೇ ನಾನು ನಿನ್ನನ್ನು ಪಡೆದೆನು.’


ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.


ನನ್ನ ಪವಿತ್ರಗುಡಾರ ಅವರೊಂದಿಗಿರುವದು. ಹೌದು, ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.


ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ಆತನು ರಕ್ತದಲ್ಲಿ ನೆನೆಸಿದ ನಿಲುವಂಗಿಯನ್ನು ಧರಿಸಿದ್ದನು. ಆತನ ಹೆಸರು ದೇವರವಾಕ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು