Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:23 - ಪರಿಶುದ್ದ ಬೈಬಲ್‌

23 ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಯೆಶಾಯಪ್ರವಾದಿಯು ಹೇಳಿದನಷ್ಟೆ; ಆ ಶಬ್ದವೇ ನಾನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜುವಾಂವಾನ್ ಇಸಾಯಿಯಾ ಪ್ರವಾದ್ಯಾಚಿ ಶಬ್ದಾ ಘೆವ್ನ್ ಜವಾಬ್ ದಿಲ್ಯಾನ್ ಡಂಗ್ಳಿತ್ ಬೊಬ್ ಮಾರ್‍ತಲೊ ಧನ್ ಮಿಯಾ “ಧನಿಯಾಕ್ ಯೆವ್ಕ್ ವಾಟ್ ನಿಟ್ ಕರಾ!” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:23
9 ತಿಳಿವುಗಳ ಹೋಲಿಕೆ  

“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ, ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.”


“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.


‘ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.


ಆಗ ಯೆಹೂದ್ಯರು, “ನಮಗೆ ಹೇಳು. ನಮ್ಮನ್ನು ಕಳುಹಿಸಿದವರಿಗೆ ನಾವು ತಿಳಿಸಬೇಕಾಗಿದೆ. ನಿನ್ನ ಬಗ್ಗೆ ನೀನು ಏನು ಹೇಳುವೆ?” ಎಂದು ಕೇಳಿದರು.


ಕಳುಹಿಸಲ್ಪಟ್ಟಿದ್ದವರಲ್ಲಿ ಕೆಲವು ಮಂದಿ ಫರಿಸಾಯರೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು