ಯೋಹಾನ 1:31 - ಪರಿಶುದ್ದ ಬೈಬಲ್31 ಆತನು ಯಾರೆಂಬುದು ನನಗೂ ಗೊತ್ತಿರಲಿಲ್ಲ. ಆದರೆ ಆತನನ್ನು ಇಸ್ರೇಲರಿಗೆ ತಿಳಿಸುವುದಕ್ಕೋಸ್ಕರ ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇಸ್ರಯೇಲರಿಗೆ ಇವರನ್ನು ತೋರ್ಪಡಿಸಬೇಕೆಂದೇ ನಾನು ನೀರಿನಿಂದ ಸ್ನಾನದೀಕ್ಷೆಕೊಡುತ್ತಾ ಬಂದೆನು; ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ,” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನನಗೂ ಆತನ ಗುರುತಿರಲಿಲ್ಲ; ಆದರೆ ಆತನನ್ನು ಇಸ್ರಾಯೇಲ್ಯರಿಗೆ ತಿಳಿಯಪಡಿಸುವದಕ್ಕೋಸ್ಕರವೇ ನಾನು ನೀರಿನ ಸ್ನಾನವನ್ನು ಮಾಡಿಸುವವನಾಗಿ ಬಂದೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನನಗೂ ಇವರ ಗುರುತಿರಲಿಲ್ಲ. ಆದರೆ ಇವರನ್ನು ಇಸ್ರಾಯೇಲರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾ ಬಂದೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತೊ ಕೊನ್ ಮನುನ್ ಮಾಕಾಚ್ ಗೊತ್ತ್ ನತ್ತೆ, ಖರೆ ಮಿಯಾ ಪಾನಿಯಾನಿ ಬಾಲ್ತಿಮ್ ದಿವ್ನ್ ತ್ಯೆಚ್ಯಾ ವಿಶಯಾತ್ ಇಸ್ರಾಯೆಲಾಚ್ಯಾ ಲೊಕಾಕ್ನಿ ತೆಚಿ ವಳಕ್ ಕರುನ್ ದಿವ್ಕ್ ಮನುನ್ ಯೆಲಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನೆಂದರೆ, “ಆತನು ಯಾರೆಂದು ನನಗೂ ಗೊತ್ತಿರಲಿಲ್ಲ. ಆದರೆ ಜನರಿಗೆ ದೀಕ್ಷಾಸ್ನಾನ ಕೊಡಲು ನನ್ನನ್ನು ಕಳುಹಿಸಿದಾತನು ನನಗೆ, ‘ಪವಿತ್ರಾತ್ಮನು ಇಳಿದುಬಂದು ಒಬ್ಬ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವೆ. ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವವನು ಆ ವ್ಯಕ್ತಿಯೇ’ ಎಂದು ಹೇಳಿದ್ದನು. ಇದು ನೆರವೇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪವಿತ್ರಾತ್ಮನು ಪರಲೋಕದಿಂದ ಪಾರಿವಾಳದ ರೂಪದಲ್ಲಿ ಇಳಿದುಬಂದು ಆತನ (ಯೇಸುವಿನ) ಮೇಲೆ ನೆಲಸುವುದನ್ನು ನಾನು ನೋಡಿದೆನು.