Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:40 - ಪರಿಶುದ್ದ ಬೈಬಲ್‌

40 ಈ ಇಬ್ಬರು ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಇವರಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಯೊವಾನ್ನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ್ದ ಇಬ್ಬರು ಶಿಷ್ಯರಲ್ಲಿ ಸಿಮೋನ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರ ಅಂದ್ರೆಯನು ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜುವಾಂವಾಚೆ ಆಯ್ಕುನ್ ಜೆಜುಚ್ಯಾ ಫಾಟ್ನಾ ಗೆಲ್ಲ್ಯಾ ದೊಗಾ ಶಿಸಾನಿತ್ಲೊ ಎಕ್ಲೊ ಸಿಮಾವ್ ಪೆದ್ರುಚೊ ಭಾವ್ ಅಂದ್ರು ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:40
11 ತಿಳಿವುಗಳ ಹೋಲಿಕೆ  

ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,


ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).


ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ.


ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.


ಯೇಸು, “ನನ್ನೊಂದಿಗೆ ಬನ್ನಿ, ಆಗ ನೀವೇ ನೋಡುವಿರಿ” ಎಂದು ಹೇಳಿದನು. ಆದ್ದರಿಂದ ಆ ಇಬ್ಬರು ಹೋಗಿ ಯೇಸು ಇಳಿದುಕೊಂಡಿದ್ದ ಸ್ಥಳವನ್ನು ನೋಡಿದರು. ಆ ದಿನ ಅವರು ಅಲ್ಲಿಯೇ ಆತನೊಂದಿಗೆ ಇದ್ದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.


ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.


ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು