Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:46 - ಪರಿಶುದ್ದ ಬೈಬಲ್‌

46 ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತನ್ನಾ ನಾಥಾನಾಯೆಲಾನ್, “ನಜರೆತಾತ್ನಾ ಕಾಯ್ ತರ್ ಬರೆ ಮನ್ತಲೆ ಯೆವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಫಿಲಿಪಾನ್ ತೆಕಾ “ಯೆ ಅನಿ ಬಗ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:46
14 ತಿಳಿವುಗಳ ಹೋಲಿಕೆ  

ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.


“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.


ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.


“ನೀವೇ ನ್ಯಾಯನಿರ್ಣಯವನ್ನು ಮಾಡಬಾರದೇಕೆ?


ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಅಂದ್ರೆಯ ಮತ್ತು ಪೇತ್ರರಂತೆ ಫಿಲಿಪ್ಪನು ಸಹ ಬೆತ್ಸಾಯಿದ ಎಂಬ ಊರಿನವನಾಗಿದ್ದನು.


ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.


ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು.


ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು.


ಈ ಗ್ರೀಕ್ ಜನರು ಫಿಲಿಪ್ಪನ ಬಳಿಗೆ ಹೋದರು. (ಫಿಲಿಪ್ಪನು ಗಲಿಲಾಯದ ಬೆತ್ಸಾಯಿ ಎಂಬ ಊರಿನವನಾಗಿದ್ದವನು.) ಅವರು, “ಸ್ವಾಮೀ, ನಾವು ಯೇಸುವನ್ನು ನೋಡಬೇಕು” ಎಂದು ಅವನನ್ನು ಕೇಳಿಕೊಂಡರು.


ಫಿಲಿಪ್ಪನು ಯೇಸುವಿಗೆ, “ಪ್ರಭುವೇ, ನಮಗೆ ತಂದೆಯನ್ನು ತೋರಿಸು. ನಮಗೆ ಅಷ್ಟೇ ಸಾಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು