ಯೋಹಾನ 1:51 - ಪರಿಶುದ್ದ ಬೈಬಲ್51 ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಮಾನಾ ತೆನಿ ತೆಂಕಾ, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ: ಮಾನ್ಸಾಚ್ಯಾ ಲೆಕಾಚ್ಯಾ ವರ್ತಿ ಸರ್ಗ್ ಉಗ್ಡುನ್ ದೆವಾಚಿ ದುತಾ ಚಡ್ತಲೆ ಅನಿ ಉತರ್ತಲೆ ತುಮಿ ಬಗ್ತ್ಯಾಶಿ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.