Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:6 - ಪರಿಶುದ್ದ ಬೈಬಲ್‌

6 ಯೋಹಾನ ಎಂಬ ಒಬ್ಬ ಮನುಷ್ಯನನ್ನು ದೇವರು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು; ಅವನ ಹೆಸರು ಯೋಹಾನನು. ಈ ಯೋಹಾನನು ಸಾಕ್ಷಿಗಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾನ್ ಧಾಡುನ್ ದಿಲ್ಲೊ ಎಕ್ ಮಾನುಸ್ ಹೊತ್ತೊ, ತೆಚೆ ನಾಂವ್ ಜುವಾಂವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:6
15 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


‘ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.


ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲ್ಲಾ ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ’ ಎಂದು ಬೋಧಿಸಿದನು.


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ಯೋಹಾನನನ್ನು ಕುರಿತು ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: ‘ಇಗೋ! ನಾನು (ದೇವರು) ನನ್ನ ದೂತನನ್ನು ನಿನಗಿಂತ ಮೊದಲು ಕಳುಹಿಸುತ್ತೇನೆ. ಅವನು ನಿನಗೆ ದಾರಿಯನ್ನು ಸಿದ್ಧಮಾಡುತ್ತಾನೆ.’


ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು