Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:16 - ಪರಿಶುದ್ದ ಬೈಬಲ್‌

16 ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹ್ಯಾ ಬಕ್ರ್ಯಾಂಚ್ಯಾ ತಾಂಡ್ಯಾತ್ ನಸಲ್ಲಿ ಮಾಕಾ ಸಮಂದ್ ಪಡಲ್ಲಿ ಅನಿ ಉಲ್ಲಿ ಬಕ್ರಿ ಹಾತ್‍. ತೆಂಕಾಬಿ ಮಿಯಾ ಫಾಟಿ ಹಾನುಕ್ ಪಾಜೆ, ತೆನಿ ಮಾಜೊ ಧನ್ ಆಯಿಕ್ತ್ಯಾತ್ ಅನಿ ತೆನಿ ಎಕುಚ್ ಕುರ್‍ಬುರಾಚ್ಯಾ ಎಕುಚ್ ತಾಂಡ್ಯಾತ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:16
48 ತಿಳಿವುಗಳ ಹೋಲಿಕೆ  

ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.


ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.


ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.


“ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.


ನಾನು ನಿನ್ನೊಂದಿಗಿದ್ದೇನೆ. ನಿನಗೆ ಕೇಡುಮಾಡಲು ಯಾರಿಗೂ ಸಾಧ್ಯವಿಲ್ಲ. ನನ್ನ ಅನೇಕ ಜನರು ಈ ಪಟ್ಟಣದಲ್ಲಿ ಇದ್ದಾರೆ” ಎಂದು ಹೇಳಿದನು.


ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.


ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.


ಜ್ಞಾನಿಯ ನುಡಿಗಳು ಪ್ರಾಣಿಗಳನ್ನು ಮುನ್ನಡೆಸುವ ಚಾವಟಿಗಳಂತಿವೆ. ಅವನ ಉಪದೇಶಗಳು ಮುರಿಯದ ಮೊಳೆಗಳಂತಿವೆ. ಅವುಗಳೆಲ್ಲ ಒಬ್ಬನೇ ಕುರುಬನಿಂದ (ದೇವರಿಂದ) ಬಂದಿವೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಆದರೆ ಕುರುಬನು ಬಾಗಿಲ ಮೂಲಕ ಪ್ರವೇಶಿಸುತ್ತಾನೆ.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಕುರುಬರೇ ಇಲ್ಲವಾದ್ದರಿಂದ ಎತ್ತರವಾದ ಎಲ್ಲಾ ಬೆಟ್ಟಗುಡ್ಡಗಳ ಮೇಲೆ ನನ್ನ ಮಂದೆಯು ಅಲೆದಾಡಿತು; ಭೂಮಂಡಲದ ಎಲ್ಲಾ ಕಡೆಗಳಲ್ಲಿ ಚದರಿ ಹೋಯಿತು.’”


ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.


ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ.


ಆ ಬಳಿಕ ಅವುಗಳ ಮುಂದೆ ಹೋಗುತ್ತಾ ಅವುಗಳಿಗೆ ಮಾರ್ಗದರ್ಶನ ಮಾಡುತ್ತಾನೆ. ಕುರಿಗಳು ಅವನನ್ನು ಹಿಂಬಾಲಿಸುತ್ತವೆ; ಏಕೆಂದರೆ ಅವು ಅವನ ಸ್ವರವನ್ನು ತಿಳಿದಿವೆ.


ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.


“ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


“ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು