ಯೋಹಾನ 10:18 - ಪರಿಶುದ್ದ ಬೈಬಲ್18 ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಕೊನಾಕ್ಬಿ ಮಾಜೊ ಜಿವ್ ಕಾಡುನ್ ಘೆವ್ಕ್ ಹೊಯ್ನಾ, ಮಿಯಾ ಮಾಜ್ಯಾ ಸ್ವಂತ್ ಕುಶಿನ್ ತೊ ದಿತಾ. ಅನಿ ತೊ ಜಿವ್ ಪರ್ತುನ್ ಘೆತಲೊ ಹಕ್ಕ್ ಮಾಕಾ ಹಾಯ್, ಹೆ ಕರುಸಾಟ್ನಿ ಮನುನ್ ಮಾಜ್ಯಾ ಬಾಬಾನ್ ಮಾಕಾ ಹುಕುಮ್ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |