Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:21 - ಪರಿಶುದ್ದ ಬೈಬಲ್‌

21 ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ಈ ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಉಳಿದವರಾದರೋ, “ಇವು ದೆವ್ವಹಿಡಿದವನ ಮಾತುಗಳೆಂದಿಗೂ ಅಲ್ಲ. ದೆವ್ವವು ಕುರುಡನಿಗೆ ಕಣ್ಣು ಕೊಡುವುದುಂಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ಕೆಲವರು - ಇವು ದೆವ್ವಹಿಡಿದವನ ಮಾತುಗಳಲ್ಲ; ದೆವ್ವವು ಕುರುಡರಿಗೆ ಕಣ್ಣುಕೊಡಬಲ್ಲದೇ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಅನಿ ಹುರಲ್ಲೆ, “ಗಿರೊಲಾಗಲ್ಲೊ ಮಾನುಸ್ ಅಸೊ ಬೊಲಿ ನಾ! ಎಕ್ ಗಿರ್‍ಯಾನ್ ಕುಡ್ಡ್ಯಾ ಮಾನ್ಸಾಕ್ ದಿಸಿ ಸರ್ಕೆ ಕರುಕ್ ಹೊತಾ ಕಾಯ್?” ಮನುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:21
11 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ? ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ?


ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ನಮಗೆ ನೋಡಲು ಕಣ್ಣುಗಳಿವೆ. ಕೇಳಲು ಕಿವಿಗಳಿವೆ. ಅವುಗಳನ್ನು ನಮಗೋಸ್ಕರ ಉಂಟುಮಾಡಿದವನು ಯೆಹೋವನೇ.


ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.


ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಜೆರುಸಲೇಮಿನಲ್ಲಿ ಆಚರಿಸುವ ಪ್ರತಿಷ್ಠೆಯ ಹಬ್ಬವು ನಡೆಯುತ್ತಿತ್ತು. ಅದು ಚಳಿಗಾಲದಲ್ಲಿ ಆಚರಿಸುವ ಹಬ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು