Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:25 - ಪರಿಶುದ್ದ ಬೈಬಲ್‌

25 ಯೇಸು, “ನಾನು ಆಗಲೇ ನಿಮಗೆ ಹೇಳಿದೆನು. ಆದರೆ ನೀವು ನಂಬಲಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಅದ್ಭುತಕಾರ್ಯಗಳನ್ನು ಮಾಡುತ್ತೇನೆ. ನಾನು ಯಾರೆಂಬುದನ್ನು ಆ ಅದ್ಭುತಕಾರ್ಯಗಳು ತೋರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಯೇಸು - ನಿಮಗೆ ಹೇಳಿದೆನು, ಆದರೆ ನೀವು ನಂಬದೆ ಇದ್ದೀರಿ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನಗೆ ಸಾಕ್ಷಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುನ್ ತೆಂಕಾ “ಮಿಯಾ ತುಮ್ಕಾ ಹೆಚ್ಯಾ ವಿಶಯಾತ್ ಸಾಂಗುನ್ ಹೊಲಾ, ಖರೆ ತುಮಿ ವಿಶ್ವಾಸ್ ಕರಿನಾ ಹೊಲ್ಯಾಶಿ. ಮಿಯಾ ಕರ್‍ತಲಿ ಸಗ್ಳಿ ಕಾಮಾ ಮಾಜ್ಯಾ ಬಾಬಾಚ್ಯಾ ಅದಿಕಾರ್‍ಯಾನ್ ಮಿಯಾ ಹಿ ಕಾಮಾ ಮಾಜ್ಯಾ ವಿಶಯಾತ್ ಸಾಕ್ಷಿ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:25
17 ತಿಳಿವುಗಳ ಹೋಲಿಕೆ  

ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.


ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂಬ ನನ್ನ ಮಾತನ್ನು ನಂಬಿರಿ. ಇಲ್ಲದಿದ್ದರೆ ನಾನು ಮಾಡಿದ ಅದ್ಭುತಕಾರ್ಯಗಳ ನಿಮಿತ್ತವಾದರೂ ನಂಬಿರಿ.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಯೇಸು ಇನ್ನೂ ಅನೇಕ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಕಣ್ಮುಂದೆ ಮಾಡಿದನು. ಆ ಅದ್ಭುತಕಾರ್ಯಗಳನ್ನು ಈ ಪುಸ್ತಕದಲ್ಲಿ ಬರೆದಿಲ್ಲ.


ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.


ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.


ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.


ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.


ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ನಾನು ಬರುವ ದಿನವನ್ನು ತಾನು ನೋಡುವುದಾಗಿ ನಿಮ್ಮ ತಂದೆಯಾದ ಅಬ್ರಹಾಮನು ಬಹು ಸಂತೋಷಪಟ್ಟನು. ಅವನು ಆ ದಿನವನ್ನು ಕಂಡು ಬಹು ಸಂತೋಷಗೊಂಡನು” ಎಂದು ಉತ್ತರಕೊಟ್ಟನು.


ನನ್ನ ತಂದೆಯು ಮಾಡುವುದನ್ನು ನಾನು ಮಾಡದಿದ್ದರೆ, ನಾನು ಹೇಳುವುದನ್ನು ನಂಬಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು