ಯೋಹಾನ 10:29 - ಪರಿಶುದ್ದ ಬೈಬಲ್29 ನನ್ನ ಕುರಿಗಳನ್ನು ನನ್ನ ತಂದೆಯೇ ನನಗೆ ಕೊಟ್ಟನು. ಆತನು ಎಲ್ಲರಿಗಿಂತಲೂ ದೊಡ್ಡವನಾಗಿದ್ದಾನೆ. ನನ್ನ ಕುರಿಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕದ್ದುಕೊಳ್ಳಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನನ್ನ ತಂದೆಯು ನನಗೆ ಕೊಟ್ಟದ್ದು ಎಲ್ಲಾದ್ದಕ್ಕಿಂತ ದೊಡ್ಡದು; ಅದನ್ನು ತಂದೆಯ ಕೈಯೊಳಗಿಂದ ಯಾರೂ ಕಸಕೊಳ್ಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಜೆ ಕಾಯ್ ಮಾಜ್ಯಾ ಬಾಬಾನ್ ಮಾಕಾ ದಿಲ್ಯಾನಾಯ್ ತೆ ಸಗ್ಳ್ಯಾಚ್ಯಾನ್ಕಿ ಮೊಟೆ, ಮಾಜೊ ಬಾಬಾ ತೆಂಕಾ ರಾಕ್ತಾನಾ ಕೊನಾಕ್ಬಿ ತೆಂಕಾ ಧುರ್ ಕರುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.