ಯೋಹಾನ 10:3 - ಪರಿಶುದ್ದ ಬೈಬಲ್3 ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬಾಗಲು ಕಾಯುವವನು ಅವನಿಗೆ ಬಾಗಲನ್ನು ತೆರೆಯುತ್ತಾನೆ, ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ದಾರಾಕ್ಡೆ ಹೊತ್ತೆ ರಾಕ್ವಾಲಿ ತೆಕಾ ದಾರ್ ಉಗಡ್ತ್ಯಾತ್, ತೊ ಅಪ್ನಾಚ್ಯಾ ಬಕ್ರ್ಯಾಕ್ನಿ ನಾವಾನಿ ಬಲ್ವುತಾ, ತಿ ಬಕ್ರಿ ತೆಚೊ ಧನ್ ಆಯಿಕ್ತ್ಯಾತ್, ಅನಿ ತೊ ತೆಂಕಾ ಫಾಟ್ನಾ ಚಾಲ್ವುನ್ ಘೆವ್ನ್ ಜಾತಾ. ಅಧ್ಯಾಯವನ್ನು ನೋಡಿ |
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.