Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:34 - ಪರಿಶುದ್ದ ಬೈಬಲ್‌

34 ಅದಕ್ಕೆ ಯೇಸು, “ನಿಮ್ಮ ಧರ್ಮಶಾಸ್ತ್ರದಲ್ಲಿ, ‘ನಾನು ನಿಮ್ಮನ್ನು ದೇವರುಗಳೆಂದು ಹೇಳಿದೆನು’ ಎಂಬುದಾಗಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ಯೇಸು - ನೀವು ದೇವರುಗಳೇ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದದೆಯಲ್ಲಾ; ಶಾಸ್ತ್ರವು ಸುಳ್ಳಾಗಲಾರದಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಯೇಸು, “ ‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆಜುನ್ ತೆಂಕಾ “ತುಮ್ಚ್ಯಾಚ್ ಖಾಯ್ದ್ಯಾತ್ನಿ?” ದೆವ್ ಮಿಯಾ ಮನ್ತಾ. ತುಮಿ ದೆವಾ ಮನುನ್ ನಾ ಕಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:34
12 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ನಾನು ನಿನ್ನನ್ನು ಫರೋಹನಿಗೆ ಮಹಾರಾಜನಂತೆ ಮಾಡಿರುವೆನು; ಆರೋನನು ಅಧಿಕೃತ ಮಾತುಗಾರನಾಗಿರುವನು.


ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.


ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು.


ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


ಇಬ್ಬರ ಸಾಕ್ಷಿ ಒಂದೇ ಆಗಿದ್ದರೆ ಅವರ ಹೇಳಿಕೆಯನ್ನು ಸ್ವೀಕರಿಸಿಕೊಳ್ಳಬೇಕೆಂದು ನಿಮ್ಮ ಧರ್ಮಶಾಸ್ತ್ರವೇ ತಿಳಿಸುತ್ತದೆ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.


ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ವಿವಿಧ ಭಾಷೆಗಳನ್ನು ಮಾತಾಡುವವರ ಮೂಲಕವೂ ವಿದೇಶಿಯರ ನಾಲಿಗೆಯ ಮೂಲಕವೂ ನಾನು ಈ ಜನರೊಂದಿಗೆ ಮಾತಾಡುವೆನು; ಆದರೂ ಇವರು ನನಗೆ ವಿಧೇಯರಾಗುವುದಿಲ್ಲ.” ಪ್ರಭುವು ಹೇಳುವುದು ಅದನ್ನೇ.


ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು