Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:8 - ಪರಿಶುದ್ದ ಬೈಬಲ್‌

8 ನಾನು ಬರುವುದಕ್ಕಿಂತ ಮೊದಲು ಬಂದವರೆಲ್ಲರೂ ಕಳ್ಳರಾಗಿದ್ದರು ಮತ್ತು ಸುಲಿಗೆಗಾರರಾಗಿದ್ದರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನಗಿಂತ ಮೊದಲು ಬಂದವರೆಲ್ಲರು ಕಳ್ಳರು ಹಾಗೂ ಕೊಳ್ಳೆಗಾರರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ; ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾಜ್ಯಾನ್ ಅದ್ದಿ ಯೆಲ್ಲೆ ಸಗ್ಳಿ ಲೊಕಾ ಚೊರಾ ಅನಿ ಲುಟುನ್ ಘೆವ್ನ್ ಜಾತಲಿ ಲೊಕಾ, ಖರೆ ಬಕ್ರಿ ತೆನಿ ಸಾಂಗಟಲ್ಲೆ ಆಯ್ಕಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:8
11 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಇಸ್ರೇಲರ ಕುರುಬರ ಸಂಗಡ ನನ್ನ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವರಿಗೆ ಹೇಳು, ‘ಇಸ್ರೇಲರ ಕುರುಬರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವುದಿಲ್ಲ?


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ.


ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.”


ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.


ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.


ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.”


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು