ಯೋಹಾನ 11:11 - ಪರಿಶುದ್ದ ಬೈಬಲ್11 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಳಿಕ ಯೇಸು, “ನಮ್ಮ ಮಿತ್ರನಾದ ಲಾಸರನು ನಿದ್ರೆಮಾಡುತ್ತಿದ್ದಾನೆ, ಅವನನ್ನು ಎಬ್ಬಿಸಲು ನಾನು ಹೋಗಬೇಕು,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈ ಮಾತುಗಳನ್ನು ಹೇಳಿದ ಮೇಲೆ ಅವರಿಗೆ - ನಮ್ಮ ವಿುತ್ರನಾದ ಲಾಜರನು ನಿದ್ರೆಮಾಡುತ್ತಾನೆ; ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹೆ ಸಾಂಗುನ್ ಹೊಲ್ಲ್ಯಾ ಮಾನಾ ಜೆಜುನ್, ಅಮ್ಚೊ ದೊಸ್ತ್ ಲಾಜರ್ ನಿದ್ಲಾ, ಖರೆ ಮಿಯಾ ಜಾವ್ನ್ ತೆಕಾ ವೈರ್ ಉಟ್ವುತಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.