Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:3 - ಪರಿಶುದ್ದ ಬೈಬಲ್‌

3 ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲಾಗಿ ಅವನ ಅಕ್ಕಂದಿರು - ಸ್ವಾಮೀ, ನಿನ್ನ ಪ್ರಿಯ ವಿುತ್ರನು ಅಸ್ವಸ್ಥನಾಗಿದ್ದಾನೆ ಎಂಬದಾಗಿ ಯೇಸುವಿನ ಬಳಿಗೆ ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಲಾಜರಾಚ್ಯಾ ಭೆನ್ಯಾನಿ “ಧನಿಯಾ ತುಜೊ ಪ್ರೆಮಾಚೊ ದೊಸ್ತ್ ಶಿಕ್ ಪಡ್ಲಾ” ಮನುನ್ ಜೆಜುಕ್ ಬಾತ್ಮಿ ಸಾಂಗುನ್ ಧಾಡಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:3
16 ತಿಳಿವುಗಳ ಹೋಲಿಕೆ  

ಯೇಸು ಮಾರ್ಥಳನ್ನು, ಆಕೆಯ ಸಹೋದರಿಯನ್ನು ಮತ್ತು ಲಾಜರನ್ನು ಪ್ರೀತಿಸುತ್ತಿದ್ದನು.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಎರಸ್ತನು ಕೊರಿಂಥದಲ್ಲಿ ನೆಲಸಿದನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ನಾನು ಅವನನ್ನು ಮಿಲೇತದಲ್ಲಿ ಇರಿಸಬೇಕಾಯಿತು.


ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು.


ಆಗ ಯೆಹೂದ್ಯರು, “ನೋಡಿ! ಯೇಸು ಅವನನ್ನು ಬಹಳವಾಗಿ ಪ್ರೀತಿಸುತ್ತಿದ್ದನು!” ಎಂದರು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು.


ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.


ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.


ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಈ ಊರಿನಲ್ಲೇ ವಾಸವಾಗಿದ್ದರು.


ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ


ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.


ಮಾರ್ಥಳು ಯೇಸುವಿಗೆ, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ.


ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು