ಯೋಹಾನ 11:42 - ಪರಿಶುದ್ದ ಬೈಬಲ್42 ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ತಿಯಾ ಕನ್ನಾಬಿ ಮಾಜೆ ಆಯಿಕ್ತೆ ಮನುನ್ ಮಾಕಾ ಗೊತ್ತ್ ಹಾಯ್, ಖರೆ ಹ್ಯಾ ಹಿತ್ತೆ ಹೊತ್ತ್ಯಾ ಲೊಕಾಂಚ್ಯಾಸಾಟಿ ಅಶೆಚ್ ಮನುಲಾ, ಅಶೆಚ್ ತೆನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ವಿಶ್ವಾಸ್ ಕರುಂದಿತ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.