Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:45 - ಪರಿಶುದ್ದ ಬೈಬಲ್‌

45 ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಮರಿಯಳನ್ನು ನೋಡಲು ಬಂದಿದ್ದ ಹಲವು ಮಂದಿ ಯೆಹೂದ್ಯರು ನಡೆದ ಸಂಗತಿಯನ್ನು ನೋಡಿ ಯೇಸುವನ್ನು ವಿಶ್ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಮರಿಯಳ ಬಳಿಗೆ ಬಂದ ಯೆಹೂದ್ಯರು ಆತನು ಮಾಡಿದ ಕಾರ್ಯವನ್ನು ನೋಡಿದಾಗ ಅವರಲ್ಲಿ ಅನೇಕರು ಆತನನ್ನು ನಂಬಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಮರಿಕ್ ಭೆಟುಕ್ ಯೆಲ್ಲ್ಯಾ ಲೈ ಲೊಕಾನಿ ಜೆಜುನ್ ಕರಲ್ಲೆ ಹೆ ಬಗಟ್ಲ್ಯಾನಿ ಅನಿ ತೆಚೆ ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:45
9 ತಿಳಿವುಗಳ ಹೋಲಿಕೆ  

ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.


ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.


ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.


ಯೆಹೂದ್ಯರು ಮರಿಯಳೊಂದಿಗೆ ಮನೆಯಲ್ಲಿದ್ದರು. ಅವರು ಆಕೆಯನ್ನು ಸಂತೈಸುತ್ತಿದ್ದರು. ಮರಿಯಳು ಎದ್ದು ಬೇಗನೆ ಹೋಗುವುದನ್ನು ಅವರು ಕಂಡರು. ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಅವರು ಭಾವಿಸಿಕೊಂಡು ಆಕೆಯನ್ನು ಹಿಂಬಾಲಿಸಿದರು.


ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಈ ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು.


ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.


ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು