Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:5 - ಪರಿಶುದ್ದ ಬೈಬಲ್‌

5 ಯೇಸು ಮಾರ್ಥಳನ್ನು, ಆಕೆಯ ಸಹೋದರಿಯನ್ನು ಮತ್ತು ಲಾಜರನ್ನು ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜುಕ್ ಮಾರ್ಥಾ ಅನಿ ತಿಚಿ ಭೆನ್ ಅನಿ ಲಾಜರಾಚೊ ಲೈ ಪ್ರೆಮ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:5
11 ತಿಳಿವುಗಳ ಹೋಲಿಕೆ  

ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.”


ಹೌದು, ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನೀವು ನನ್ನನ್ನು ಪ್ರೀತಿಸಿದರಿಂದ ಮತ್ತು ನಾನು ದೇವರಿಂದ ಬಂದೆನೆಂದು ನೀವು ನಂಬುವುದರಿಂದ ಆತನು ನಿಮ್ಮನ್ನು ಪ್ರೀತಿಸುತ್ತಾನೆ.


ಆಗ ಯೆಹೂದ್ಯರು, “ನೋಡಿ! ಯೇಸು ಅವನನ್ನು ಬಹಳವಾಗಿ ಪ್ರೀತಿಸುತ್ತಿದ್ದನು!” ಎಂದರು.


ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.


ಯೇಸು ಮತ್ತು ಆತನ ಶಿಷ್ಯರು ಪ್ರಯಾಣ ಮಾಡುತ್ತಾ ಒಂದು ಊರಿಗೆ ಬಂದರು. ಮಾರ್ಥಳೆಂಬ ಸ್ತ್ರೀ ಯೇಸುವನ್ನು ತನ್ನ ಮನೆಗೆ ಆಮಂತ್ರಿಸಿದಳು.


ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.


ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ.


ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಈ ಊರಿನಲ್ಲೇ ವಾಸವಾಗಿದ್ದರು.


ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.


ಲಾಜರನು ಅಸ್ವಸ್ಥನಾಗಿದ್ದಾನೆ ಎಂಬ ವಾರ್ತೆಯನ್ನು ಆತನು ಕೇಳಿದಾಗ ತಾನಿದ್ದ ಸ್ಥಳದಲ್ಲಿಯೇ ಇನ್ನೂ ಎರಡು ದಿನಗಳವರೆಗೆ ತಂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು