Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:54 - ಪರಿಶುದ್ದ ಬೈಬಲ್‌

54 ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಲ್ಲಿ ಶಿಷ್ಯರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ತಸೆಮನುನ್ ಅನಿ ಫಿಡೆ ಜೆಜು ಜುದೆವಾಂಚ್ಯಾ ಮದ್ದಿ ಬಹಿರಂಗ್ ಫಿರುಕ್ನಾ, ತೊ ಥೈತ್ನಾ ಡಂಗ್ಳಿಚ್ಯಾ ಜಗ್ಗೊಳ್ ಹೊತ್ತ್ಯಾ ಎಫ್ರಾಯಿಮ್ ಮನ್ತಲ್ಯಾ ಶಾರಾಕ್ ಗೆಲೊ, ಥೈ ತೊ ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:54
9 ತಿಳಿವುಗಳ ಹೋಲಿಕೆ  

ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.


ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.


ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.


ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು.


ಆದರೆ ಯೇಸುವಿನ ಬಗ್ಗೆ ಬಹಿರಂಗವಾಗಿ ಮಾತಾಡಲು ಆ ಜನರಲ್ಲಿ ಯಾರಿಗೂ ಸಾಕಷ್ಟು ಧೈರ್ಯವಿರಲಿಲ್ಲ. ಜನರು ಯೆಹೂದ್ಯ ನಾಯಕರುಗಳಿಗೆ ಹೆದರಿಕೊಂಡಿದ್ದರು.


ಆದ್ದರಿಂದ ಯೇಸುವಿನ ಸಹೋದರರು ಹಬ್ಬಕ್ಕಾಗಿ ಹೊರಟರು. ಅವರು ಹೋದನಂತರ ಆತನು ಸಹ ಗುಟ್ಟಾಗಿಹೋದನು.


ಎರಡು ವರ್ಷಗಳ ನಂತರ, ಅಬ್ಷಾಲೋಮನ ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕೆಲವು ಜನರು ಬಾಳ್‌ಹಾಚೋರಿಗೆ ಬಂದರು. ಇದನ್ನು ಬಂದು ನೋಡುವಂತೆ ರಾಜನ ಮಕ್ಕಳಿಗೆಲ್ಲ ಅಬ್ಷಾಲೋಮನು ಆಹ್ವಾನವನ್ನು ನೀಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು