Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:10 - ಪರಿಶುದ್ದ ಬೈಬಲ್‌

10 ಆದರೆ ಮಹಾಯಾಜಕರು ಲಾಜರನನ್ನು ಸಹ ಕೊಲ್ಲಲು ಯೋಜನೆಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10-11 ಲಾಸರನ ನಿಮಿತ್ತವಾಗಿ ಅನೇಕ ಯೆಹೂದ್ಯರು ತಮ್ಮನ್ನು ಬಿಟ್ಟು ಯೇಸುವಿನಲ್ಲಿ ನಂಬಿಕೆಯಿಟ್ಟ ಕಾರಣ ಲಾಸರನನ್ನು ಕೂಡ ಕೊಲ್ಲಬೇಕೆಂದು ಮುಖ್ಯಯಾಜಕರು ಆಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಮಹಾಯಾಜಕರು ಲಾಜರನನ್ನೂ ಕೊಲ್ಲಬೇಕೆಂದು ಆಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮುಖ್ಯಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆಮನುನ್ ಯಾಜಕಾಂಚ್ಯಾ ಮುಖಂಡಾನಿ ಲಾಜರಾಕ್ಬಿ ಜಿವಾನಿ ಮಾರ್‍ತಲೆ ಯೆವ್ಜನ್ ಕರ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:10
14 ತಿಳಿವುಗಳ ಹೋಲಿಕೆ  

“ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.


ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


ಆದರೆ ಮಹಾಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.


ಯೇಸು ಬೆಥಾನಿಯಲ್ಲಿದ್ದಾನೆ ಎಂಬ ಸುದ್ದಿಯನ್ನು ಅನೇಕ ಯೆಹೂದ್ಯರು ಕೇಳಿ ಆತನನ್ನೂ ಲಾಜರನನ್ನೂ ನೋಡಬೇಕೆಂದು ಅಲ್ಲಿಗೆ ಹೋದರು. ಯೇಸುವಿನಿಂದ ಜೀವಂತವಾಗಿ ಎಬ್ಬಿಸಲ್ಪಟ್ಟವನೇ ಲಾಜರನು.


ಲಾಜರನ ನಿಮಿತ್ತ ಅನೇಕ ಯೆಹೂದ್ಯರು ತಮ್ಮ ನಾಯಕರನ್ನು ತೊರೆದು ಯೇಸುವಿನಲ್ಲಿ ನಂಬಿಕೆ ಇಡುತ್ತಿದ್ದರು. ಆದಕಾರಣವೇ ಯೆಹೂದ್ಯ ನಾಯಕರು ಲಾಜರನನ್ನು ಸಹ ಕೊಲ್ಲಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು