ಯೋಹಾನ 12:26 - ಪರಿಶುದ್ದ ಬೈಬಲ್26 ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಜೆ ಕೊನಾಕ್ ಮಾಜಿ ಸೆವಾ ಕರುಕ್ ಪಾಜೆ ತೊ ಮಾಜ್ಯಾ ಫಾಟ್ನಾ ಯೆಂವ್ದಿತ್, ಅಶೆಚ್ ಮಿಯಾ ಖೈ ರ್‍ಹಾತಾ ಥೈ ಮಾಜೊ ಸೆವಕ್ ಬಿ ರ್‍ಹಾತಾ. ಅನಿ ಮಾಜೊ ಬಾಬಾ ಮಾಜಿ ಸೆವಾ ಕರ್‍ತಲ್ಯಾಕ್ ಮಾಜೊ ಬಾಬಾ ಭೊಮಾನ್ ದಿತಾ”. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.