Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:4 - ಪರಿಶುದ್ದ ಬೈಬಲ್‌

4 ಇಸ್ಕರಿಯೋತ ಯೂದನು ಅಲ್ಲಿದ್ದನು. ಅವನು ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದನು. (ಮುಂದೆ, ಯೇಸುವಿಗೆ ದ್ರೋಹ ಮಾಡಿದವನು ಇವನೇ.) ಮರಿಯಳು ಮಾಡಿದ ಈ ಕಾರ್ಯವನ್ನು ಯೂದನು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೇಸುವನ್ನು ಹಿಡಿದುಕೊಡಲಿದ್ದ ಹಾಗೂ ಶಿಷ್ಯರಲ್ಲಿ ಒಬ್ಬನಾಗಿದ್ದ ಇಸ್ಕರಿಯೋತಿನ ಯೂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಆತನ ಶಿಷ್ಯರಲ್ಲಿ ಒಬ್ಬನು, ಅಂದರೆ ಆತನನ್ನು ಹಿಡುಕೊಡುವದಕ್ಕಿದ್ದ ಇಸ್ಕರಿಯೋತ ಯೂದನೆಂಬವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದ ಹಾಗೂ ಅವರನ್ನು ಹಿಡಿದುಕೊಡುವುದಕ್ಕಿದ್ದ ಯೂದ ಇಸ್ಕರಿಯೋತನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜೆಜುಚ್ಯಾ ಶಿಸಾನಿತ್ಲ್ಯಾ ಎಕ್ಲ್ಯಾನ್ ಜುದಾಸ್ ಇಸ್ಕರಿಯೊತಾಕ್ ಹೆ ಬರೆ ದಿಸುಕ್ನಾ ಹ್ಯೊ ಫಿಡೆ ಜೆಜುಕ್ ಧರುನ್ ದಿತಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:4
10 ತಿಳಿವುಗಳ ಹೋಲಿಕೆ  

ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.


ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.


ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)


ಯೂದ (ಯಾಕೋಬನ ಮಗ) ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.)


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ನಂತರ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಮಹಾಯಾಜಕರ ಬಳಿಗೆ ಹೋಗಿ,


ಅವನು, “ಆ ಪರಿಮಳದ ದ್ರವ್ಯದ ಬೆಲೆ ಮುನ್ನೂರು ಬೆಳ್ಳಿನಾಣ್ಯಗಳು. ಅದನ್ನು ಮಾರಿ ಆ ಹಣವನ್ನು ಬಡವರಿಗೆ ಕೊಡಬೇಕಿತ್ತು” ಎಂದು ಟೀಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು