Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:45 - ಪರಿಶುದ್ದ ಬೈಬಲ್‌

45 ನನ್ನನ್ನು ನೋಡುವವನು ನನ್ನನ್ನು ಕಳುಹಿಸಿದಾತನನ್ನು ನಿಜವಾಗಿಯೂ ನೋಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ನನ್ನನ್ನು ಕಾಣುವವನು ನನ್ನನ್ನು ಕಳುಹಿಸಿದಾತನನ್ನೇ ಕಾಣುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನನ್ನನ್ನು ನೋಡುವವರು ನನ್ನನ್ನು ಕಳುಹಿಸಿದ ತಂದೆಯನ್ನೇ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಜೊ ಕೊನ್ ಮಾಕಾ ಬಗ್ತಾ, ತೊ ಮಾಕಾ ಧಾಡಲ್ಲ್ಯಾಕ್ ಬಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:45
8 ತಿಳಿವುಗಳ ಹೋಲಿಕೆ  

ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಯೆಶಾಯನು ಆತನ (ಯೇಸುವಿನ) ಮಹಿಮೆಯನ್ನು ನೋಡಿದ್ದರಿಂದಲೇ ಹೀಗೆ ಹೇಳಿದನು.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು