Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:14 - ಪರಿಶುದ್ದ ಬೈಬಲ್‌

14 ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮಗೆ ಪ್ರಭೂವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕರ್ತನೂ ಗುರುವೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದಿರಲಾಗಿ ನೀವು ಸಹ ಒಬ್ಬರ ಕಾಲನ್ನು ಒಬ್ಬರು ತೊಳೆಯುವ ಹಂಗಿನವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆಚ್ಯಾ ಸಾಟ್ನಿ ಮಿಯಾ ತುಮ್ಚ್ಯಾ ಗುರುಜಿನ್ ಅನಿ ಧನಿಯಾನ್ ತುಮ್ಚೆ ಪಾಂಯೆ ಧುಲೊ, ತಸೆಚ್ ತುಮಿಬಿ ಎಕಾಮೆಕಾಚೆ ಪಾಂಯೆ ಧುವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:14
22 ತಿಳಿವುಗಳ ಹೋಲಿಕೆ  

ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.


ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.


ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು.


“ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು