Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:29 - ಪರಿಶುದ್ದ ಬೈಬಲ್‌

29 ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರಲ್ಲಿ ಕೆಲವರು - ಯೂದನ ವಶದಲ್ಲಿ ಹಣದ ಚೀಲವಿದ್ದದರಿಂದ ಹಬ್ಬಕ್ಕಾಗಿ ನಮಗೆ ಬೇಕಾದದ್ದನ್ನು ಕೊಂಡುಕೋ ಎಂಬದಾಗಿಯೋ ಬಡವರಿಗೆ ಏನಾದರೂ ಕೊಡು ಎಂಬದಾಗಿಯೋ ಯೇಸು ಅವನಿಗೆ ಹೇಳುತ್ತಾನೆ ಎಂದು ನೆನಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆಂಚೆಕ್ಡೆ ಹೊತ್ತ್ಯಾ ಪೈಶಾಂಚಿ ಜವಾಬ್ದಾರಿ ಜುದಾಸ್ ಬಗುನ್ ಘೆಯ್, ತಸೆಮನುನ್ ಉಲ್ಲ್ಯಾ ಶಿಸಾನಿ ಸನಾಕ್ ಪಾಜೆ ಹೊಲ್ಲೆ ಸಗ್ಳೆ ಹಾನ್, ನಾಹೊಲ್ಯಾರ್ ಕಾಯ್ಬಿ ಇಕಾತ್ ಹಾನುನ್ ಗರಿಬಾಕ್ನಿ ದಿವ್ಕ್ ಮನುನ್ ಜೆಜು ಜುದಾಸಾಕ್ ಸಾಂಗುಕ್ ಲಾಗ್ಲಾ ಮನುನ್ ಚಿಂತ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:29
6 ತಿಳಿವುಗಳ ಹೋಲಿಕೆ  

ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ಯೇಸು ಯೂದನಿಗೆ ಏಕೆ ಹಾಗೆ ಹೇಳಿದನೆಂದು ಊಟಕ್ಕೆ ಕುಳಿತಿದ್ದವರಲ್ಲಿ ಯಾರಿಗೂ ಅರ್ಥವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು