ಯೋಹಾನ 13:8 - ಪರಿಶುದ್ದ ಬೈಬಲ್8 ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪೇತ್ರನು - ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಎಂದು ಹೇಳಿದ್ದಕ್ಕೆ ಯೇಸು - ನಾನು ನಿನ್ನನ್ನು ತೊಳೆಯದಿದ್ದರೆ ನನ್ನ ಸಂಗಡ ನಿನಗೆ ಪಾಲಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ಪೆದ್ರುನ್, “ನಾ ಕನ್ನಾಚ್ ಮಾಜೆ ಪಾಯ್ ಧುವ್ಕ್ ಮಿಯಾ ತುಕಾ ಸೊಡಿನಾ” ಮಟ್ಲ್ಯಾನ್. ತನ್ನಾ ಜೆಜುನ್, “ಮಿಯಾ ತುಜೆ ಪಾಯ್ ಧುಯ್‍ನಸ್ಲ್ಯಾರ್, ತುಕಾ ಮಾಜಾಕ್ಡೆ ಕಾಯ್ಬಿ ವಾಟ್ನಿ ನಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.
ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.